ಚಾಮರಾಜನಗರ: ಸಂಬಳ ನೀಡಿಲ್ಲವೆಂದು ಗಾಮ ಪಂಚಾಯಿತಿ ಕಚೇರಿ ಮುಂದೆಯೇ ವಾಟರ್ಮ್ಯಾನ್ ನೇಣಿಗೆ ಶರಣು
Oct. 17, 2025, 1:27 p.m.ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಎರಡು ವರ್ಷಗಳಿಂದ ಸಂಬಳ ಸಿಗದೆ ಬೇಸತ್ತಿದ್ದ ವಾಟರ್ಮ್ಯಾನ್ ಗ್ರಾ.ಪಂ. ಕಚೇರಿ ಬಾಗಿಲು ಬಳಿ ನೇಣಿಗೆ ಶರಣಾದ ಘಟನೆ ನಡೆದಿದೆ. ಹೊಂಗನೂರು ಗ್ರಾಮಸ್ಥರು ಗ್ರಾಮ ಪಂಚಾಯಿತಿಯ ಬಳಿ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








