ಹಾಡಹಗಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಕೊಲೆ ನಡೆದಿದೆ. ಕಾಲೇಜು ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ವಿದ್ಯಾರ್ಥಿನಿಯನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಎಕ್ಸಾಮ್ ಬರೆದು ಮನೆ ಸೇರಬೇಕಿದ್ದ ವಿದ್ಯಾರ್ಥಿನಿ ಮಸಣ ಸೇರಿದ್ದಾಳೆ. ಇನ್ನು ಈ ಕೊಲೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬಿ ಫಾರ್ಮ್ ವ್ಯಾಸಂಗ ಮಾಡುತ್ತಿದ್ದ ಪ್ರಿಯಾ, ಎಕ್ಸಾಮ್ ಇದೆ ಎಂದು ಇಂದು (ಅಕ್ಟೋಬರ್ 16) ಬೆಳಗ್ಗೆ ಏಳು ಗಂಟೆಗೆ ಮನೆಯಿಂದ ಕಾಲೇಜಿಗೆ ಹೋಗಿದ್ದು, ಮಧ್ಯಾಹ್ನ ಕಾಲೇಜ್ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಹಿಂದಿನಿಂದ ಬೈಕ್ ನಲ್ಲಿ ಬಂದ ದುಷ್ಕರ್ಮಿ, ಪ್ರಿಯಾಳ ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಶ್ರೀರಾಮ ಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಲವ್ ವಿಚಾರಕ್ಕೆ ಈ ಕೊಲೆ ಮಾಡಿರುವ ಸಾಧ್ಯತೆಗಳಿವೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ವಿಘ್ನೇಶ್ ಎಂಬಾತನ ಮೇಲೆ ಪೊಲೀಸರಿಗೆ ಅನುಮಾನ ಬಂದಿದ್ದು ತನಿಖೆ ನಡೆಸಿದ್ದಾರೆ.
ಪ್ರೀತಿ ನಿರಾಕರಿಸಿದ್ದ 20 ವರ್ಷದ ಯಾಮಿನಿ ಪ್ರಿಯಾ, ಕಾಲೇಜಿನಿಂದ ಮನೆಗೆ ಹೋಗುತ್ತಿದ್ದ ವೇಳೆ ರೈಲ್ವೆ ಟ್ರ್ಯಾಕ್ ಬಳಿ ಆಕೆ ಕಣ್ಣಿಗೆ ಖಾರದ ಪುಡಿ ಎರಚಿದ್ದಾನೆ. ಬಳಿಕ ಪ್ರಿಯಾ ಕುತ್ತಿಗೆ, ಮುಖಕ್ಕೆ ಹರಿತವಾದ ಆಯುಧದಿಂದ ಹಲ್ಲೆ ಮಾಡಿ ಪರಿಯಾಗಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಪ್ರಿಯಾ ಸ್ಥಳದಲ್ಲೇ ಜೀವ ಬಿಟ್ಟಿದ್ದಾಳೆ ಎಂದು ತಿಳಿದುಬಂದಿದೆ.









Comments
Leave a Comment